ಬೆಂಗಳೂರು, ಮೇ 18: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ, ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಉತ್ತರ ಹಾಗೂ ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಭಾರಿ ಮಳೆಯೊಂದಿಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿಗೆ ಯೆಲ್ಲೋ ಅಲರ್ಟ್
ದಕ್ಷಿಣಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಸಾಧಾರಣ ಮಳೆ?
ರಾಯಚೂರು, ಯಾದಗಿರಿ, ವಿಜಯಾಪುರ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ
